Vijayapura ಜಿಲ್ಲೆಯ ಮುದ್ದೇಬಿಹಾಳದಲ್ಲಿ ಪದವಿ ವಿದ್ಯಾರ್ಥಿಯೊಬ್ಬ ಅನಾರೋಗ್ಯದಿಂದ ಮೃತಪಟ್ಟಿದ್ದಾನೆ.

Vijayapura ಜಿಲ್ಲೆಯ ಮುದ್ದೇಬಿಹಾಳದಲ್ಲಿ ಪದವಿ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ. ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ನಿವಾಸಿ ಬಾಲಪ್ಪ (18) ಮೃತ ಯುವಕನಾಗಿದ್ದು, ಮುದ್ದೇಬಿಹಾಳದಲ್ಲಿ ವ್ಯಾಸಂಗ ಮಾಡುತ್ತಿದ್ದರು. ಕುಟುಂಬದವರ ಪ್ರಕಾರ, ಅವರು ಅತಿಯಾಗಿ ಕೂಲ್ ಡ್ರಿಂಕ್ಸ್ ಸೇವಿಸುತ್ತಿದ್ದು, ಆರೋಗ್ಯ ಸಮಸ್ಯೆಯಿಂದ ಬಾಗಲಕೋಟೆಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.
MUST READ : Vachanananda Swamiji ವಿರುದ್ಧ 410 ಪುಟಗಳ ಚಾರ್ಜ್ಶೀಟ್ ಸಲ್ಲಿಕೆ..!!
ಆದರೆ, ಚಿಕಿತ್ಸೆ ಫಲಕಾರಿಯಾಗದೆ ಜೂನ್ 12ರಂದು ಮೃತಪಟ್ಟಿದ್ದಾರೆ. ಯುವಕನ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಘಟನೆ ಕುರಿತು ಸೂಕ್ತ ತನಿಖೆ ನಡೆಸಿ ಸಾರ್ವಜನಿಕರಲ್ಲಿ ಆರೋಗ್ಯ ಜಾಗೃತಿ ಮೂಡಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಅಧಿಕೃತ ವೈದ್ಯಕೀಯ ವರದಿಯ ಬಳಿಕ ಸಾವಿನ ನಿಖರ ಕಾರಣ ಸ್ಪಷ್ಟವಾಗಬೇಕಿದೆ.
MUST WATCH : ಶಾಸಕ ಷಡಕ್ಷರಿ ಆರೋಗ್ಯದಲ್ಲಿ ಚೇತರಿಕೆ ಇಂದು ಅಥವಾ ನಾಳೆ ಡಿಸ್ಚಾರ್ಜ್ ಸಾಧ್ಯತೆ




