‘ಬಲರಾಮನ ದಿನಗಳು’ ಚಿತ್ರದ ಪ್ರಚಾರದ ವೇಳೆ ನಟ Vinod Prabhakar ಆರೋಗ್ಯದಲ್ಲಿ ಏರುಪೇರು ಕಂಡುಬಂದಿದ್ದು ಆಸ್ಪತ್ರೆಗೆ ದಾಖಲಾಗಿದ್ದರು.

‘ಬಲರಾಮನ ದಿನಗಳು’ ಚಿತ್ರದ ಪ್ರಚಾರ ಕಾರ್ಯದಲ್ಲಿ ನಿರತರಾಗಿದ್ದ ಕನ್ನಡ ನಟ Vinod Prabhakar ಅವರ ಆರೋಗ್ಯದಲ್ಲಿ ಹಠಾತ್ ಏರುಪೇರು ಕಂಡುಬಂದಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಸಿನಿಮಾ ಪ್ರಚಾರಕ್ಕಾಗಿ ತೆರಳುತ್ತಿದ್ದ ವೇಳೆ ಆರೋಗ್ಯದಲ್ಲಿ ವ್ಯತ್ಯಯ ಉಂಟಾಗಿ, ಅವರನ್ನು ಬೆಂಗಳೂರಿನ ನಾಗರಭಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು.
ರಕ್ತದೊತ್ತಡದಲ್ಲಿ ಏರಿಳಿತ ಕಂಡುಬಂದಿದ್ದಲ್ಲದೆ, ಎದೆನೋವು ಕಾಣಿಸಿಕೊಂಡ ಕಾರಣ ವೈದ್ಯರು ತಕ್ಷಣ ಚಿಕಿತ್ಸೆ ಆರಂಭಿಸಿದರು.
ಮುನ್ನೆಚ್ಚರಿಕಾ ಕ್ರಮವಾಗಿ ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಿ ಆರೋಗ್ಯ ತಪಾಸಣೆ ನಡೆಸಲಾಗಿದೆ ಎಂಬ ಮಾಹಿತಿ ಹೊರಬಂದಿತ್ತು.

ಈ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಅಭಿಮಾನಿಗಳು ಹಾಗೂ ಕುಟುಂಬಸ್ಥರಲ್ಲಿ ಆತಂಕ ಹೆಚ್ಚಾಗಿತ್ತು.
ಇದೇ ವೇಳೆ, ಕೆಲವೇ ದಿನಗಳಲ್ಲಿ ಬಿಡುಗಡೆಯಾಗಲಿರುವ ‘ಬಲರಾಮನ ದಿನಗಳು’ ಚಿತ್ರದ ಪ್ರಚಾರದಲ್ಲಿ ವಿನೋದ್ ಪ್ರಭಾಕರ್ ನಿರಂತರವಾಗಿ ತೊಡಗಿಸಿಕೊಂಡಿದ್ದರಿಂದ ಆರೋಗ್ಯ ಸಮಸ್ಯೆ ಉಂಟಾಗಿರಬಹುದು ಎಂಬ ಮಾತುಗಳು ಕೇಳಿಬಂದಿದ್ದವು.
MUST READ : Challakere ಬಸ್ ನಿಲ್ದಾಣ ಬಳಿ ಕರಡಿ ಪ್ರತ್ಯಕ್ಷ CCTV ಯಲ್ಲಿ ಸೆರೆ..!!
ಆದರೆ ನಂತರ ಚಿತ್ರತಂಡ ಹಾಗೂ ಆಪ್ತ ಮೂಲಗಳು ವಿನೋದ್ ಪ್ರಭಾಕರ್ ಅವರ ಆರೋಗ್ಯದ ಬಗ್ಗೆ ಸ್ಪಷ್ಟನೆ ನೀಡಿವೆ. ನಿರಂತರ ಕೆಲಸದ ಒತ್ತಡ ಮತ್ತು ವಿಶ್ರಾಂತಿಯ ಕೊರತೆಯಿಂದ ಅವರಿಗೆ ಲೋ ಬಿಪಿ (Low BP) ಉಂಟಾಗಿದ್ದು, ಆರೋಗ್ಯದಲ್ಲಿ ಸ್ವಲ್ಪ ಏರುಪೇರು ಕಂಡುಬಂದ ಕಾರಣ ವೈದ್ಯಕೀಯ ತಪಾಸಣೆಗಾಗಿ ಆಸ್ಪತ್ರೆಗೆ ಭೇಟಿ ನೀಡಲಾಗಿತ್ತು ಎಂದು ತಿಳಿಸಲಾಗಿದೆ.

ವೈದ್ಯರ ಸಲಹೆಯಂತೆ ಅಗತ್ಯವಿರುವ ಎಲ್ಲಾ ಪರೀಕ್ಷೆಗಳನ್ನು ನಡೆಸಲಾಗಿದ್ದು, ಅವರ ಆರೋಗ್ಯದಲ್ಲಿ ಯಾವುದೇ ಗಂಭೀರ ಸಮಸ್ಯೆ ಇಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ಪ್ರಸ್ತುತ ವಿನೋದ್ ಪ್ರಭಾಕರ್ ಆರೋಗ್ಯವಾಗಿದ್ದು, ಚಿಕಿತ್ಸೆಯ ನಂತರ ಉತ್ತಮ ಚೇತರಿಕೆ ಕಂಡಿದ್ದಾರೆ. ಅವರು ಶೀಘ್ರದಲ್ಲೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದು, ಸೋಮವಾರದಿಂದ ಮತ್ತೆ ‘ಬಲರಾಮನ ದಿನಗಳು’ ಚಿತ್ರದ ಪ್ರಚಾರ ಕಾರ್ಯದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ. ಬಹುನಿರೀಕ್ಷಿತ ‘ಬಲರಾಮನ ದಿನಗಳು’ ಸಿನಿಮಾ ಇದೇ ಜೂನ್ 26ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದ್ದು, ವಿನೋದ್ ಪ್ರಭಾಕರ್ ಸಂಪೂರ್ಣ ಚೇತರಿಸಿಕೊಂಡಿರುವ ಸುದ್ದಿ ಅಭಿಮಾನಿಗಳಿಗೆ ನೆಮ್ಮದಿ ತಂದಿದೆ.
MUST WATCH : ಪಾಕಿಸ್ತಾನವನ್ನು ಹೊಗಳಿದ ಕಾಂಗ್ರೆಸ್ ಶಾಸಕ ಯಾಸೀರ್ ಪಠಾಣ್ ಹೀಗ್ಯಾಕಂದ್ರು ಗೊತ್ತಾ




