Accident | ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಬಸ್ – ಬಸ್ನಲ್ಲಿದ್ದ ಸಾಫ್ಟ್ ವೇರ್ ಎಂಜಿನಿಯರ್ ಸ್ಥಳದಲ್ಲೇ ಸಾ*

ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಬಂದ ಖಾಸಗಿ ಬಸ್ವೊಂದು ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದ್ದು, ಬಸ್ನಲ್ಲಿದ್ದ ಸಾಫ್ಟ್ವೇರ್ ಎಂಜಿನಿಯರ್ ಯುವತಿ, ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ನಗರದ ಹೊರವಲಯದ, ಅಗಲಗುರ್ಕಿ ಫ್ಲೈಓವರ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮೃತಳನ್ನು ಬೆಂಗಳೂರಿನ ಆಕ್ಸೆಂಚರ್ ಕಂಪನಿಯಲ್ಲಿ ಸಾಫ್ಟ್ವೇರ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ 28 ವರ್ಷದ ಕೌಸರ್ ತಾಜ್ ಎಂದು ಗುರುತಿಸಲಾಗಿದೆ.
ಇದನ್ನು ಓದಿ : ಟ್ರ್ಯಾಕ್ಟರ್–ಬೈಕ್ ನಡುವೆ ಡಿಕ್ಕಿ – PC ಪರೀಕ್ಷೆ ಬರೆದು ಬರ್ತಿದ್ದ ಯುವಕ ಸಾವು

ಚಾಲಕನ ಅತಿವೇಗದ ಚಾಲನೆಯೇ ಅಪಘಾತಕ್ಕೆ ಕಾರಣ
ಇನ್ನು ಹೈದರಾಬಾದ್ನಿಂದ ಬೆಂಗಳೂರಿಗೆ ಬರುತ್ತಿದ್ದ ಶ್ರೀಕೃಷ್ಣ ಟ್ರಾವೆಲ್ಸ್ ಬಸ್, ಮುಂಜಾನೆ ಸುಮಾರು 6 ಗಂಟೆ ವೇಳೆಯಲ್ಲಿ ಅಗಲಗುರ್ಕಿ ಫ್ಲೈಓವರ್ ಬಳಿ ಅಪಘಾತಕ್ಕೀಡಾಗಿದೆ. ಇನ್ನು ಹೆದ್ದಾರಿಯಲ್ಲಿ ಸಾಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ, ಮುಂದೆ ಸಾಗುತ್ತಿದ್ದ ಲಾರಿಗೆ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಸ್ನಲ್ಲಿದ್ದ ಕೌಸರ್ ತಾಜ್ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ಬಸ್ ಚಾಲಕನ ಅತಿವೇಗ ಹಾಗೂ ಅಜಾಗರೂಕತೆಯ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಮೃತಳ ಕುಟುಂಬಸ್ಥರು ಆರೋಪಿಸಿದ್ದಾರೆ.

Accident – ಚಿಕ್ಕಬಳ್ಳಾಪುರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲು
ಇನ್ನು ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಸದ್ಯ ಘಟನೆ ಸಂಬಂಧ ಮೃತಳ ಸಹೋದರಿ ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಬಸ್ ಚಾಲಕನ ವಿರುದ್ಧ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಇದನ್ನು ನೋಡಿ : TANVEER SAIT ಗೆ ಸಚಿವ ಸ್ಥಾನ ಕೈತಪ್ಪಿದಕ್ಕೆ ಆತ್ಮಹ* ಯತ್ನ




