Weather Alert : ಕರ್ನಾಟಕದಲ್ಲಿ ಹೀಟ್ ವೇವ್ ನಡುವೆಯೇ ಗುಡುಗು ಸಹಿತ ಆಲಿಕಲ್ಲು ಮಳೆ ಅಬ್ಬರ. ಉತ್ತರ ಒಳನಾಡಿನ ಆರು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ನೀಡಿದ್ದು, ಇನ್ನೂ 2-3 ದಿನ ಮಳೆಯ ಮುನ್ಸೂಚನೆ ನೀಡಲಾಗಿದೆ.

Weather Alert : ರಾಜ್ಯದಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಿರುವ ನಡುವೆಯೇ ಇಂದು ಕೂಡ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ವಿಶೇಷವಾಗಿ ಉತ್ತರ ಕರ್ನಾಟಕ ಭಾಗದಲ್ಲಿ ಆಲಿಕಲ್ಲು ಮಳೆ ರಭಸ ಹೆಚ್ಚಾಗುವ ಸಾಧ್ಯತೆ ಇದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಕೆಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯ ಪ್ರಕಾರ, ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ 40-50 ಕಿ.ಮೀ ವೇಗದ ಗಾಳಿ ಜೊತೆಗೆ ಗುಡುಗು ಸಹಿತ ಆಲಿಕಲ್ಲು ಮಳೆಯಾಗುವ ಸಂಭವವಿದೆ.
ಆದ್ದರಿಂದ, ಈ ಜಿಲ್ಲೆಗಳ ಜನರು ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.

ಕರಾವಳಿ ಭಾಗದಲ್ಲಿ ಹೀಟ್ ವೇವ್ ಬಳಿಕ ಮಳೆಯ ನಿರೀಕ್ಷೆ
ಕಳೆದ ಕೆಲವು ದಿನಗಳಿಂದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಹೀಟ್ ವೇವ್ ಅಲರ್ಟ್ ಜಾರಿಯಲ್ಲಿತ್ತು.
ಆದರೆ ಇದೀಗ ಬಿಸಿಲಿನಿಂದ ತತ್ತರಿಸಿದ್ದ ಕರಾವಳಿ ಪ್ರದೇಶದಲ್ಲಿ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
ಇದು ತಾಪಮಾನ ಕಡಿಮೆಯಾಗಲು ಸಹಾಯಕವಾಗಬಹುದು ಎಂದು ನಿರೀಕ್ಷಿಸಲಾಗಿದೆ.
MUST READ : Challakere ಬಳಿ ಸರ್ಕಾರಿ ಬಸ್ ಪಲ್ಟಿ – 44 ಪ್ರಯಾಣಿಕರು ಪಾರು..!!

ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲೂ ಮಳೆಯ ಮುನ್ಸೂಚನೆ
ಇನ್ನೊಂದೆಡೆ, ದಕ್ಷಿಣ ಒಳನಾಡಿನ ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ವಿಜಯನಗರ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿಯೂ
ಗುಡುಗು, ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಆದರೆ ಉಳಿದ ಕೆಲವು ಪ್ರದೇಶಗಳಲ್ಲಿ ಶುಷ್ಕ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮಳೆಯ ಅವಾಂತರ: ಮರಗಳು ಧರೆಗುರುಳಿ, ಮನೆಗಳಿಗೆ ಹಾನಿ
ಬಿಸಿಲಿನ ನಡುವೆಯೇ ಸುರಿದ ಭಾರೀ ಮಳೆಯ ಪರಿಣಾಮವಾಗಿ ಕೆಲವು ಜಿಲ್ಲೆಗಳಲ್ಲಿ ಅವಾಂತರಗಳು ಸಂಭವಿಸಿವೆ.ವಿಶೇಷವಾಗಿ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನಲ್ಲಿ, ಬಿರುಗಾಳಿ ಸಹಿತ ಮಳೆಗೆ 200ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಮತ್ತು ದೊಡ್ಡ ಮರಗಳು ಧರೆಗುರುಳಿವೆ. ಇದರಿಂದ ಹಲವೆಡೆ ವಿದ್ಯುತ್ ಸಂಪರ್ಕ ವ್ಯತ್ಯಯಗೊಂಡಿದೆ.

ರೈತರಿಗೆ ಭಾರೀ ನಷ್ಟ – ಸಂಚಾರ ಅಸ್ತವ್ಯಸ್ತ
ಅದೇ ರೀತಿ, ಚಿಕ್ಕಮಗಳೂರು ಜಿಲ್ಲೆಯ ತರಿಕೆರೆ ಪ್ರದೇಶದಲ್ಲಿ ಮನೆಗಳ ಮೇಲೆ ತೆಂಗಿನ ಮರ ಬಿದ್ದು ಹಾನಿಯಾಗಿದೆ.ಇನ್ನೊಂದೆಡೆ, ರಾಯಚೂರು ಜಿಲ್ಲೆಯಲ್ಲಿ ಹೆದ್ದಾರಿಗಳ ಮೇಲೆ ಮರಗಳು ಬಿದ್ದು ಸಂಚಾರ ಅಸ್ತವ್ಯಸ್ತಗೊಂಡಿದೆ.
ಮಳೆಯ ಅಬ್ಬರದಿಂದ ಅಡಕೆ ತೋಟಗಳು ನಾಶವಾಗಿದ್ದು, ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ.ಈ ಹಿನ್ನೆಲೆಯಲ್ಲಿ ಸಂತ್ರಸ್ತರು ಸರ್ಕಾರದ ಪರಿಹಾರದ ನಿರೀಕ್ಷೆಯಲ್ಲಿದ್ದಾರೆ.

ಮುಂದಿನ 2-3 ದಿನ ಮಳೆಯ ಮುನ್ಸೂಚನೆ
ಒಟ್ಟಾರೆ, ರಾಜ್ಯದಲ್ಲಿ ಇನ್ನೂ 2 ರಿಂದ 3 ದಿನಗಳ ಕಾಲ ಗುಡುಗು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಆದ್ದರಿಂದ ಜನರು ಸುರಕ್ಷತಾ ಕ್ರಮಗಳನ್ನು ಪಾಲಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
MUST WATCH : BENGALURU | ಬೆತ್ತಲೆ ಸ್ಥಿತಿಯಲ್ಲಿ ಯುವತಿ ಶ* ಪತ್ತೆ – ಹರಿದ ಚೀಟಿಗಳಲ್ಲಿದೆಯಾ ಸಾ*ನ ಸಿಕ್ರೇಟ್.?




