ಧರ್ಮಸ್ಥಳ ಬುರುಡೆ ಕೇಸ್ನಲ್ಲಿ Prakash Raj ಹೆಸರು ತಳುಕು – ಎಕ್ಸ್ ಪೋಸ್ಟ್ನಲ್ಲಿ ನಟ ಸ್ಪಷ್ಟನೆ.

ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಹೆಸರು ಸಾಮಾಜಿಕ ಜಾಲತಾಣಗಳು ಹಾಗೂ ಕೆಲವು ಮಾಧ್ಯಮಗಳಲ್ಲಿ ಪ್ರಸ್ತಾಪವಾಗುತ್ತಿರುವ ಬಗ್ಗೆ ನಟ ಪ್ರಕಾಶ್ ರಾಜ್ ( Prakash Raj ) ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

Prakash Raj ಪೋಸ್ಟ್ನಲ್ಲಿ ಏನಿದೆ?
ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ಹೆಸರು ಚರ್ಚೆಯಾಗುತ್ತಿರೋದು ಗಮನಕ್ಕೆ ಬಂದಿದೆ. ಇದು ಅತ್ಯಂತ ಸೂಕ್ಷ್ಮವಾದ ವಿಷಯ ಮತ್ತು ಲಕ್ಷಾಂತರ ಭಕ್ತರ ನಂಬಿಕೆಗೆ ನೋವುಂಟು ಮಾಡಬಹುದಾದ ವಿಚಾರ. ಹಾಗಾಗಿ, ಈ ಕುರಿತ ಅನುಮಾನಗಳಿಗೆ ಉತ್ತರಿಸುವುದು ನನ್ನ ಕರ್ತವ್ಯ.
ಸದ್ಯ ನಾನು ದೂರದೂರಿನಲ್ಲಿದ್ದೇನೆ. ಇನ್ನೆರಡು ದಿನಗಳಲ್ಲಿ ನಾನೇ ಸ್ವತಃ ಬಂದು ಮಾಧ್ಯಮ ಮಿತ್ರರ ಮುಖೇನ ಉತ್ತರಿಸುತ್ತೇನೆ. ಅಲ್ಲಿಯವರೆಗೆ ಗಾಳಿಮಾತುಗಳನ್ನು ಮತ್ತು ಕೆಲವು ದುರುಳರು ಈ ಸುದ್ದಿಗೆ ಕಟ್ಟಲೆತ್ನಿಸುತ್ತಿರುವ ರೆಕ್ಕೆ ಪುಕ್ಕಗಳನ್ನು ನಂಬದಿರಿ ಎಂದು ಜನರಲ್ಲಿ ನಟ ಪ್ರಕಾಶ್ ರಾಜ್ ಮನವಿ ಮಾಡಿದ್ದಾರೆ.
ಇದನ್ನು ಓದಿ : ಶ್ರೀರಾಮ ಮತ್ತು ರಾಮಾಯಣ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ – ನಟ Prakash Raj..!!
ಏನಿದು ಪ್ರಕರಣ?
ಧರ್ಮಸ್ಥಳ ಬುರುಡೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಚಿನ್ನಯ್ಯ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದು, ಇಡೀ ಪ್ರಕರಣದ ಹಿಂದೆ ನಟ ಪ್ರಕಾಶ್ ರಾಜ್, ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ವಿಠಲ್ ಗೌಡ, ಜಯಂತ್, ಯೂಟ್ಯೂಬರ್ಗಳಾದ ಸಮೀರ್ ಎಂ.ಡಿ, ಅಜಯ್, ದಿನೇಶ್ ಸೇರಿದಂತೆ ಹಲವು ಪ್ರಭಾವಿ ವ್ಯಕ್ತಿಗಳಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾನೆ. ತಾವು ಹೇಳಿದಂತೆ ನಡೆದುಕೊಳ್ಳದೆ ಇದ್ದರೆ ಕೊಲೆ ಮಾಡುತ್ತೇವೆ ಎಂದು ಬೆದರಿಕೆ ಹಾಕಿದ್ದರು ಎಂದು ಆರೋಪಿಸಿದ್ದರು.

ಇದನ್ನು ನೋಡಿ : ಶಾಸಕ ಸುರೇಶ್ ಗೌಡ ಅವ್ರೇ ಈ ಸುದ್ದಿ ನೋಡಿ – ನಿಮ್ಮ ಕ್ಷೇತ್ರದ ಜನರೆಂದ್ರೆ ಯಾಕಿಷ್ಟು ನಿರ್ಲಕ್ಷ್ಯ..!




