
Rain Alert : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ : ರಾಜ್ಯದಲ್ಲಿ ಮುಂದಿನ 5 ದಿನ ವ್ಯಾಪಕ ಮಳೆ: 15 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ
Rain Alert : ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರಿಸುವ ಮುನ್ಸೂಚನೆಯಿದೆ. ಹೌದು.. ಬಂಗಾಳ ಕೊಲ್ಲಿ ಭಾಗದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇದೆ. ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಪ್ರದೇಶಗಳಲ್ಲಿ ಗುಡುಗು-ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ಈ ಜಿಲ್ಲೆಗಳಲ್ಲಿ ಭಾರಿ ಮಳೆ
ಕರಾವಳಿ ಕರ್ನಾಟಕದಲ್ಲಿ ಸೆಪ್ಟೆಂಬರ್ 20ರಿಂದ 24ರವರೆಗೆ ಭಾರಿ ಮಳೆ ಹಾಗೂ ಗುಡುಗು-ಮಿಂಚಿನ ಎಚ್ಚರಿಕೆ ನೀಡಲಾಗಿದೆ.
ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲೂ ಇದೇ ಅವಧಿಯಲ್ಲಿ ಹಲವು ಕಡೆ ಭಾರಿ ಮಳೆಯ ಸಾಧ್ಯತೆಯನ್ನು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರಾವಳಿ ಜಿಲ್ಲೆಗಳ ಜೊತೆಗೆ ಮಲೆನಾಡು ಹಾಗೂ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲೂ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ. ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬೀದರ್, ಕಲಬುರಗಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಸೇರಿದಂತೆ ಹಲವು ಜಿಲ್ಲೆಗಳ ಕೆಲವೆಡೆ ಮಳೆ ಜೋರಾಗುವ ಸಾಧ್ಯತೆ ಇದೆ.
READ THIS : ಮಳೆಗೆ ಬ್ರೇಕ್ – ಆಗಸ್ಟ್ 31ರವರೆಗೆ ಹೇಗಿರುತ್ತೆ ಹವಾಮಾನ?

ಸಿಲಿಕಾನ್ ಸಿಟಿಯಲ್ಲೂ ಮಳೆ ಮುನ್ಸೂಚನೆ
ಇನ್ನು ರಾಜಧಾನಿ ಬೆಂಗಳೂರಿಗೂ ಮಳೆ ಮುನ್ಸೂಚನೆ ನೀಡಲಾಗಿದೆ. ಸೆಪ್ಟೆಂಬರ್ 20 ಮತ್ತು 21ರಂದು ನಗರದಲ್ಲಿ ಒಂದೆರಡು ಸುತ್ತು ಮಳೆ ಅಥವಾ ಗುಡುಗು ಮಳೆಯಾಗುವ ಸಾಧ್ಯತೆ ಇದೆ.
ಸೆಪ್ಟೆಂಬರ್ 22ರಂದು ಮಳೆ ಅಥವಾ ಗುಡುಗು ಮಳೆಯೊಂದಿಗೆ ಬಲವಾದ ಗಾಳಿ ಬೀಸುವ ಸಾಧ್ಯತೆಯಿದ್ದು, ನಂತರವೂ ಹಗುರ ಮಳೆಯ ಮುನ್ಸೂಚನೆ ಇದೆ.
Rain Alert – ಮತ್ತೆ ಮಳೆ ಚುರುಕು
ಒಟ್ಟಾರೆ ಬಂಗಾಳ ಕೊಲ್ಲಿಯ ಹವಾಮಾನ ವ್ಯವಸ್ಥೆಯ ಪರಿಣಾಮ ರಾಜ್ಯದಲ್ಲಿ ಮತ್ತೆ ಮಳೆ ಚುರುಕುಗೊಳ್ಳುವ ಸಾಧ್ಯತೆಯಿದ್ದು,
ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಭಾಗಗಳಲ್ಲಿ ಮುಂದಿನ ದಿನಗಳಲ್ಲಿ ಮಳೆಯ ಅಬ್ಬರ ಕಂಡುಬರುವ ಸಾಧ್ಯತೆ ಇದೆ.

MUST WATCH : ಮಹಿಳೆಯ ಚಿನ್ನದ ಸರ ಕದ್ದು ಎಸ್ಕೇಪ್ – ಇಬ್ಬರನ್ನ ಬಂಧಿಸಿದ ತುಮಕೂರು ಪೊಲೀಸರು




