Darshan ಪ್ರಕರಣದಲ್ಲಿ ಸಾಕ್ಷಿಗಳ ವಿಚಾರಣೆ ಆರಂಭ: ಒಂದು ವರ್ಷದೊಳಗೆ 60 ಸಾಕ್ಷಿಗಳ ವಿಚಾರಣೆಗೆ ಕೋರ್ಟ್ ಆದೇಶ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆಗೆ ವೇಗ ನೀಡಿರುವ ನ್ಯಾಯಾಲಯ, ವಾರದಲ್ಲಿ ನಾಲ್ಕು ದಿನಗಳ ಕಾಲ ಟ್ರಯಲ್ ನಡೆಸಲು ನಿರ್ಧರಿಸಿದೆ. ಅಗತ್ಯವಿದ್ದರೆ ಐದನೇ ದಿನವೂ ವಿಚಾರಣೆ ನಡೆಸುವುದಾಗಿ ನ್ಯಾಯಾಲಯ ತಿಳಿಸಿದೆ.
59ನೇ ಸಿಸಿಎಚ್ ನ್ಯಾಯಾಲಯದಲ್ಲಿ ಟ್ರಯಲ್ ಆರಂಭ
ನಗರದ 59ನೇ ಸಿಸಿಎಚ್ ನ್ಯಾಯಾಲಯದಲ್ಲಿ ನಿನ್ನೆಯಿಂದ ಪ್ರಕರಣದ ಟ್ರಯಲ್ ಆರಂಭವಾಗಿದ್ದು, ಸಾಕ್ಷಿಗಳ ವಿಚಾರಣೆಯೂ ಆರಂಭವಾಗಿದೆ. ಪ್ರಕರಣದ ಮಹತ್ವ ಹಾಗೂ ಸಾರ್ವಜನಿಕ ಕುತೂಹಲದ ಹಿನ್ನೆಲೆಯಲ್ಲಿ ವಿಚಾರಣೆಗೆ ವೇಗ ನೀಡಲಾಗಿದೆ. ವಿಶೇಷ ಸರ್ಕಾರಿ ಅಭಿಯೋಜಕ ಪ್ರಸನ್ನ ಕುಮಾರ್ ಅವರು, ಸುಪ್ರೀಂಕೋರ್ಟ್ ನಿರ್ದೇಶನದ ಅನ್ವಯ ಒಂದು ವರ್ಷದೊಳಗೆ 60 ಸಾಕ್ಷಿಗಳ ವಿಚಾರಣೆ ಪೂರ್ಣಗೊಳಿಸಬೇಕಿದೆ ಎಂದು ನ್ಯಾಯಾಲಯದ ಗಮನಕ್ಕೆ ತಂದರು.

ಆರೋಪಿಗಳ ಪರ ವಕೀಲರಿಂದ ಸಹಕಾರದ ಭರವಸೆ
ಇದಕ್ಕೆ ಪ್ರತಿಕ್ರಿಯಿಸಿದ ಆರೋಪಿಗಳ ಪರ ವಕೀಲರು ನ್ಯಾಯಾಲಯದ ಕಾರ್ಯಚಟುವಟಿಕೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು. ನಟ ದರ್ಶನ ಹಾಗೂ ಪವಿತ್ರಗೌಡ ಪರ ವಕೀಲರೂ ಪ್ರಕರಣದ ತ್ವರಿತ ವಿಚಾರಣೆಗೆ ಅಗತ್ಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಇದನ್ನು ಓದಿ : ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ 5 ಆರೋಪಿಗಳಿಗೆ ಬಿಗ್ ರಿಲೀಫ್

ಮುಂದೂಡಿಕೆಗೆ ಅವಕಾಶ ಇಲ್ಲ – ನ್ಯಾಯಾಲಯದ ಖಡಕ್ ಸೂಚನೆ
ವಿಚಾರಣೆಯ ವೇಳೆ ಯಾವುದೇ ಕಾರಣಕ್ಕೂ ಪ್ರಕರಣವನ್ನು ಮುಂದೂಡಿಕೆ ಮಾಡುವಂತಿಲ್ಲ ಎಂದು ನ್ಯಾಯಾಲಯ ಸ್ಪಷ್ಟ ಸೂಚನೆ ನೀಡಿದೆ. ಪ್ರಾಸಿಕ್ಯೂಷನ್ ಮತ್ತು ಆರೋಪಿಗಳ ಪರ ವಕೀಲರು ವಿಚಾರಣೆಗೆ ಅಡ್ಡಿಯಾಗದಂತೆ ಸಹಕರಿಸಬೇಕೆಂದು ನ್ಯಾಯಾಲಯ ತಿಳಿಸಿದೆ.
Darshan ಪ್ರಕರಣ – ವಾರದಲ್ಲಿ 4 ದಿನ ವಿಚಾರಣೆ
ಪ್ರಕರಣದ ಮಹತ್ವ ಮತ್ತು ಸಾಕ್ಷಿಗಳ ಸಂಖ್ಯೆಯನ್ನು ಪರಿಗಣಿಸಿ ವಾರದಲ್ಲಿ ನಾಲ್ಕು ದಿನಗಳ ಕಾಲ ನಿಯಮಿತವಾಗಿ ವಿಚಾರಣೆ ನಡೆಸಲಾಗುವುದು. ಅಗತ್ಯ ಬಿದ್ದರೆ ಐದನೇ ದಿನವೂ ವಿಚಾರಣೆ ನಡೆಸಲು ಕ್ರಮ ಕೈಗೊಳ್ಳಲಾಗುವುದು ಎಂದು 59ನೇ ಸಿಸಿಎಚ್ ನ್ಯಾಯಾಲಯ ಆದೇಶಿಸಿದೆ.

ಇದನ್ನು ನೋಡಿ : ಸಚಿವ ಸ್ಥಾನ ಸಿಗದಿದ್ದಕ್ಕೆ JAYACHANDRA ಬೇಸರ – ಸಂಪುಟ ಪುನಾರಚನೆ ಬಗ್ಗೆ JAYACHANDRA ಏನಂದ್ರು




