
DODDABALLAPURA : ಕಸ ವಿಂಗಡನೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು – ತುಂಡು ತುಂಡಾದ ದೇಹ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಕಸ ವಿಂಗಡಣೆ ಘಟಕದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯಂತ್ರಕ್ಕೆ ಸಿಲುಕಿ 45 ವರ್ಷದ ಮಹಿಳೆಯೊಬ್ಬರು ದಾರುಣವಾಗಿ ಸಾವನ್ನಪ್ಪಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಕಾಡತಿಪ್ಪೂರು ಗ್ರಾಮದ ಅರಸಮ್ಮ ಮೃತ ಮಹಿಳೆ.
READ THIS : ಗಂಡನ ಮನೆಯವರ ಕಿರುಕುಳಕ್ಕೆ ಮಹಿಳೆ ಸಾವು? ಸಾವಿನ ನ್ಯಾಯಕ್ಕಾಗಿ ಪ್ರತಿಭಟನೆ
ಆಗಿದ್ದೇನು?
ಹೌದು.. ದೊಡ್ಡಬಳ್ಳಾಪುರದಲ್ಲಿರುವ MSGP ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ಅರಸಮ್ಮ ಕಳೆದ ಮೂರ್ನಾಲ್ಕು ವರ್ಷಗಳಿಂದ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಇಂದು ಬೆಳಗ್ಗೆ ಎಂದಿನಂತೆ ಕೆಲಸಕ್ಕೆ ಬಂದಿದ್ದ ಅರಸಮ್ಮ, ಕಸ ವಿಂಗಡಣೆ ಯಂತ್ರದ ಬಳಿ ಕೆಲಸ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಯಂತ್ರಕ್ಕೆ ಸಿಲುಕಿ ಸಾವನ್ನಪ್ಪಿದ್ದಾರೆ.

DODDABALLAPURA – ಪ್ರಕರಣ ದಾಖಲು!
ಯಂತ್ರದ ಬಳಿ ಕೆಲಸ ಮಾಡುವಾಗ ಈ ಅವಘಡ ಹೇಗೆ ಸಂಭವಿಸಿತು..? ಕಾರ್ಮಿಕರ ಸುರಕ್ಷತೆಗೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿತ್ತಾ..? ಅನ್ನೋದು ತನಿಖೆಯಿಂದ ಸ್ಪಷ್ಟವಾಗಬೇಕಿದೆ. ಘಟನೆ ಸಂಬಂಧ ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
MUST WATCH : ಜಿಲ್ಲಾಡಳಿತ ಆದೇಶಕ್ಕೆ ಕೋರ್ಟ್ ಬ್ರೇಕ್ – ಶ್ರೀಗಳ ಪರ ಹೈಕೋರ್ಟ್ ತಡೆಯಾಜ್ಞೆ




