NH-66 Arate ಸೇತುವೆ ಬಳಿ ಸಿಡಿಲು ಬಡಿದು ಪಂಜಾಬ್ ಮೂಲದ ಕಾರ್ಮಿಕ ಅಶುತೋಷ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ…

ಕುಂದಾಪುರ: ರಾಷ್ಟ್ರೀಯ ಹೆದ್ದಾರಿ-66ರ Arate Bridge ಸಮೀಪ ಗುರುವಾರ ಸಂಜೆ ಸಿಡಿಲು ಬಡಿದು ಕಾರ್ಮಿಕನೊಬ್ಬ ಮೃತಪಟ್ಟ ದುರ್ಘಟನೆ ನಡೆದಿದೆ.
ಈ ಘಟನೆಯಲ್ಲಿ ಪಂಜಾಬ್ ಮೂಲದ ಅಶುತೋಷ್ (35) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮತ್ತೋರ್ವ ಕಾರ್ಮಿಕ ಲವಜೋತ್ ಸಿಂಗ್ (28) ಗಾಯಗೊಂಡಿದ್ದು ಕುಂದಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
MUST READ : Sirsi : ಜನಗಣತಿ ಕಾರ್ಯಕ್ಕೆ ತೆರಳುತ್ತಿದ್ದ ಶಿಕ್ಷಕಿ ಟ್ರ್ಯಾಕ್ಟರ್ ಡಿಕ್ಕಿಗೆ ಬಲಿ..!!

ಘಟನೆ ಹೇಗೆ ಸಂಭವಿಸಿತು
ಅರಾಟೆ ಹಳೆಯ ಸೇತುವೆಯ ದುರಸ್ತಿ ಕಾಮಗಾರಿ ನಡೆಯುತ್ತಿದ್ದ ವೇಳೆ ಕಾರ್ಮಿಕರು ಕೆಲಸದಲ್ಲಿ ತೊಡಗಿಸಿಕೊಂಡಿದ್ದರು.
ಈ ವೇಳೆ ಸಂಜೆ ವೇಳೆ ತೀವ್ರ ಗುಡುಗು-ಮಿಂಚು ಸಹಿತ ಭಾರೀ ಮಳೆ ಸುರಿದಿದ್ದು, ಸಿಡಿಲು ಬಡಿದು ಈ ದುರ್ಘಟನೆ ಸಂಭವಿಸಿದೆ.
ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅಶುತೋಷ್ ಮಾರ್ಗಮಧ್ಯೆಯೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ
ಗುರುವಾರ ಸಂಜೆ ಕುಂದಾಪುರ ತಾಲೂಕಿನಾದ್ಯಂತ ಭಾರೀ ಮಳೆಯಾಗಿದ್ದು, ಹಲವು ದಿನಗಳ ಉಷ್ಣತೆಗೆ ತಾತ್ಕಾಲಿಕ ತಂಪು ನೀಡಿದೆ.
ಆದರೆ, ಗುಡುಗು-ಮಿಂಚಿನ ಅಬ್ಬರದಿಂದ ಜನಜೀವನ ಕೆಲಕಾಲ ಅಸ್ತವ್ಯಸ್ತಗೊಂಡಿದ್ದು, ಕೆಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ.
MUST WATCH : ಡಿಕೆಶಿಗೆ ಇಂದು ಹುಟ್ಟುಹಬ್ಬದ ಸಂಭ್ರಮ ವಿಶೇಷವಾಗಿ ಆಶೀರ್ವಾದಿಸಿದ ಪುರೋಹಿತರು | DKS BIRTHDAY SPECIAL |




