Bengaluru ಟ್ರಿನಿಟಿ ಮೆಟ್ರೋ ನಿಲ್ದಾಣದ ಬಳಿ ಕಾಮಗಾರಿ ವೇಳೆ ಕರೆಂಟ್ ಶಾಕ್ನಿಂದ ಕಾರ್ಮಿಕ ಸಾವನ್ನಪ್ಪಿದ ಪ್ರಕರಣದಲ್ಲಿ ನಾಲ್ವರು BMRCL ಅಧಿಕಾರಿಗಳ ವಿರುದ್ಧ ಹಲಸೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

Bengaluru ಟ್ರಿನಿಟಿ ಮೆಟ್ರೋ ನಿಲ್ದಾಣದ ಸಮೀಪ ಮೆಟ್ರೋ ಕಾಮಗಾರಿ ವೇಳೆ ಕರೆಂಟ್ ಶಾಕ್ ತಗುಲಿ ಕಾರ್ಮಿಕ ಗುರುವಪ್ಪ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು BMRCL ಅಧಿಕಾರಿಗಳ ವಿರುದ್ಧ ಹಲಸೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಮೃತ ಕಾರ್ಮಿಕನ ಪುತ್ರ ಮೂರ್ತಿ ನೀಡಿದ ದೂರಿನ ಮೇರೆಗೆ ಗುತ್ತಿಗೆ ಕಂಪನಿಯ ಸೂರಜ್, ಇನ್ಚಾರ್ಜ್ ರಾಜೇಶ್, ವ್ಯವಸ್ಥಾಪಕ ಮಾನಸ ಹಾಗೂ ಮತ್ತೋರ್ವ BMRCL ಅಧಿಕಾರಿಯ ವಿರುದ್ಧ ನಿರ್ಲಕ್ಷ್ಯದ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ.
MUST READ : ರಾಜ್ಯದ ವಿದ್ಯಾರ್ಥಿಗಳಿಗೆ Bus Pass ಶುಲ್ಕ ಮರುಪಾವತಿ – ಇಲ್ಲಿದೆ ಸಂಪೂರ್ಣ ಮಾಹಿತಿ

ಜೂನ್ 26ರಂದು ಪಿಲ್ಲರ್ ಸಂಖ್ಯೆ 153ರ ಬಳಿ ಅರ್ಥ್ ಪಿಟ್ ಕಾಮಗಾರಿ ನಡೆಯುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದ್ದು, ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಕಾರ್ಮಿಕ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದರು. ಪ್ರಕರಣದ ಕುರಿತು ಹಲಸೂರು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
MUST WATCH : DUDHAKAR ON PRADEEP ESHWAR | ವೇದಿಕೆಲಿ ಬೆಕ್ಕಿನಂತೆ ಇದ್ದು ಹೊರಗಡೆ ಬಂದು ಪೌರುಷ ತೋರಿಸಿದ್ರೆ ಜನ ಸುಮ್ನಿರ್ತಾರಾ.




