Yadgiri ಜಿಲ್ಲೆಯ ವಡಗೇರಾ ತಾಲೂಕಿನ ತುಮಕೂರು ಗ್ರಾಮದಲ್ಲಿ ಭಾರೀ ಮಳೆಗೆ ಮನೆ ಗೋಡೆ ಕುಸಿದು 8 ವರ್ಷದ ಬಾಲಕಿ ಅಕ್ಷತಾ ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ನಡೆದಿದೆ.

Yadgiri ಜಿಲ್ಲೆಯ ವಡಗೇರಾ ತಾಲೂಕಿನ ತುಮಕೂರು ಗ್ರಾಮದಲ್ಲಿ ಸೋಮವಾರ ಸುರಿದ ಭಾರೀ ಮಳೆಯ ಪರಿಣಾಮವಾಗಿ ದುರ್ಘಟನೆ ಸಂಭವಿಸಿದೆ. ಮನೆ ಗೋಡೆ ಕುಸಿದು 8 ವರ್ಷದ ಬಾಲಕಿ ಅಕ್ಷತಾ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.
ಅಡುಗೆ ಮನೆಯ ಗೋಡೆ ಕುಸಿದು ಘಟನೆ
ಸಿದ್ದಪ್ಪ ಅವರ ಅಡುಗೆ ಮನೆಯ ಗೋಡೆ ಭಾರೀ ಮಳೆಗೆ ತಡೆದುಕೊಳ್ಳಲಾಗದೆ ಕುಸಿದಿದೆ. ಈ ವೇಳೆ ಮನೆ ಅಂಗಳದಲ್ಲಿ ಆಟವಾಡುತ್ತಿದ್ದ ಮಕ್ಕಳು ಅಪಾಯಕ್ಕೆ ಸಿಲುಕಿದ್ದಾರೆ.
ಅಕ್ಷತಾ ಎಂಬ 8 ವರ್ಷದ ಬಾಲಕಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದು, ಇನ್ನೂ ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ.
MUST READ : ಬಾಟಲಿ, ಕ್ಯಾನ್ಗಳಲ್ಲಿ ಪೆಟ್ರೋಲ್,ಡೀಸೆಲ್ ಮಾರಾಟಕ್ಕೆ ಬ್ರೇಕ್!
ಗಾಯಗೊಂಡ ಮಕ್ಕಳನ್ನು ತಕ್ಷಣ ಯಾದಗಿರಿ ಯೀಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯಕೀಯ ತಂಡದಿಂದ ಅಗತ್ಯ ಚಿಕಿತ್ಸೆ ಮುಂದುವರಿದಿದೆ.
ಘಟನೆಯ ಮಾಹಿತಿ ಪಡೆದ ತಕ್ಷಣ ಜಿಲ್ಲಾಧಿಕಾರಿ ಹರ್ಷಲ್ ಭೋಯರ್, ಜಿಪಂ ಸಿಇಓ ಲವೀಶ್ ಒರಡಿಯಾ ಹಾಗೂ ಎಸ್ಪಿ ಪೃಥ್ವಿಕ ಶಂಕರ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪೊಲೀಸ್ ತನಿಖೆ ಮುಂದುವರಿಕೆ
ಈ ಘಟನೆ ವಡಗೇರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣ ಸಂಬಂಧ ಮುಂದಿನ ತನಿಖೆ ನಡೆಯುತ್ತಿದೆ.
MUST READ : TUMAKURUಗೆ ಕಾದಿದ್ಯಾ ಜಲ ಕಂಟಕ..?! ನೀರು ಬಿಡದಂತೆ ಮಾಡ್ತಿದ್ದಾರಾ DKS..?




