
TUMAKURU : ಅಪರಿಚಿತ ವಾಹನ ಡಿಕ್ಕಿ – ಯುವಕ ಸ್ಥಳದಲ್ಲೇ ಸಾವು
ತುಮಕೂರು–ಶಿರಾ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಯುವಕ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಜೋಡಿ ದೇವರಹಳ್ಳಿ ಗ್ರಾಮದ ಲಕ್ಷ್ಮೀಕಾಂತರಾಜು ಮೃತ ಯುವಕ ಎಂದು ಗುರುತಿಸಲಾಗಿದೆ.
READ THIS : ಕಂಟೇನರ್ಗೆ ಕಾರು Accident – ನವವಿವಾಹಿತೆ ಸೇರಿ ಇಬ್ಬರು ಸಾವು..!

ಸ್ಥಳದಲ್ಲೇ ಯುವಕ ದಾರುಣ ಸಾವು!
ಲಕ್ಷ್ಮೀಕಾಂತರಾಜು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದ್ದು, ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಲಕ್ಷ್ಮೀಕಾಂತರಾಜು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ.
TUMAKURU – ಚಾಲಕ ಸ್ಥಳದಿಂದ ಪರಾರಿ!
ಇನ್ನು ಅಪಘಾತದ ಬಳಿಕ ವಾಹನ ನಿಲ್ಲಿಸದೇ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆ ಕಳ್ಳಂಬೆಳ್ಳ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತಕ್ಕೆ ಕಾರಣವಾದ ವಾಹನ ಹಾಗೂ ಚಾಲಕನ ಪತ್ತೆಗೆ ತನಿಖೆ ಮುಂದುವರಿಸಿದ್ದಾರೆ.

MUST WATCH : ವಾಹನ ಸಂಚಾರಕ್ಕೆ ಶುರುವಾದ ಕಿರಿಕ್ ಭಜರಂಗದಳ ಅಧ್ಯಕ್ಷನ ಮೇಲೆ ಹಲ್ಲೆ




