
21 ವರ್ಷದ ಯುವಕನ ಕಿಡ್ನಾಪ್ ಮಾಡಿ ಕೊಲೆ – ಮೃತದೇಹ ರೈಲ್ವೆ ಟ್ರ್ಯಾಕ್ ಬಳಿ ಎಸೆದು ಪರಾರಿ! ಐವರ ಬಂಧನ
ಬೀದರ್ ಜಿಲ್ಲೆಯ ಭಾಲ್ಕಿ ಪಟ್ಟಣದಲ್ಲಿ ಫೈನಾನ್ಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಯುವಕನೊಬ್ಬನನ್ನು ಕಿಡ್ನಾಪ್ ಮಾಡಿ ಭೀಕರವಾಗಿ ಕೊಲೆ ಮಾಡಲಾಗಿರುವ ದಾರುಣ ಘಟನೆ ನಡೆದಿದೆ. ಸುದರ್ಶನ ರಟಕಲ್ ಕೊಲೆಯಾದ ಯುವಕನಾಗಿದ್ದು, ಪ್ರಕರಣ ಸಂಬಂಧ ಭಾಲ್ಕಿ ನಗರ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ ತನಿಖೆ ಮುಂದುವರಿಸಿದ್ದಾರೆ.
ಮೃತದೇಹ ರೈಲ್ವೆ ಟ್ರ್ಯಾಕ್ ಬಳಿ ಎಸೆದು ಪರಾರಿ!
ಭಾಲ್ಕಿ ಪಟ್ಟಣದ ಮಾಸುಮಪಾಶಾ ಕಾಲೋನಿಯಲ್ಲಿದ್ದ ಸುದರ್ಶನ ಅವರನ್ನು ಆರೋಪಿಗಳು ಅಪಹರಿಸಿದ್ದರು. ಬಳಿಕ ಅವರ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದ್ದು, ಮೃತದೇಹವನ್ನು ಕಡ್ಯಾಳ ಗ್ರಾಮದ ಬಳಿಯ ರೈಲ್ವೆ ಟ್ರ್ಯಾಕ್ ಸಮೀಪ ಬಿಟ್ಟು ಆರೋಪಿಗಳು ಪರಾರಿಯಾಗಿದ್ರು.
READ THIS : ಕಾಲೇಜು ವಿದ್ಯಾರ್ಥಿಗಳ ನಡುವೆ ಹೊಡೆದಾಟ – ಓರ್ವನ ಕೊಲೆ!

ಐವರು ಆರೋಪಿಗಳ ಬಂಧನ
ವಿಷಯ ತಿಳಿಯುತ್ತಿದ್ದಂತೆ ರೈಲ್ವೆ ಪೊಲೀಸರು ಹಾಗೂ ಭಾಲ್ಕಿ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಪ್ರಕರಣ ಸಂಬಂಧ ಭಾಗ್ಯವಾನ್, ವಿಠಲ್, ಸಚಿನ್, ಸಾಯಿ ಕಾಂಬ್ಳೆ ಹಾಗೂ ಆದಿತ್ಯ ಕಾಂಬ್ಳೆ ಎಂಬ ಐವರು ಆರೋಪಿಗಳನ್ನು ಭಾಲ್ಕಿ ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.
21 ವರ್ಷದ ಯವಕ ಸಾವಿಗೆ ಸೂಕ್ತ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹ
ಇತ್ತ ಸುದರ್ಶನ ಸಾವಿಗೆ ಸೂಕ್ತ ನ್ಯಾಯ ದೊರಕಿಸಿಕೊಡಬೇಕು ಎಂದು ಆಗ್ರಹಿಸಿ ಸಾರ್ವಜನಿಕರು ಭಾಲ್ಕಿ ಪೊಲೀಸ್ ಠಾಣೆ ಎದುರು ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಕರಣದ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ಪ್ರಸ್ತುತ ಐವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಭಾಲ್ಕಿ ನಗರ ಪೊಲೀಸರು, ಕೊಲೆಗೆ ನಿಖರ ಕಾರಣವೇನು ಎಂಬ ಬಗ್ಗೆ ತನಿಖೆ ಮುಂದುವರಿಸಿದ್ದಾರೆ

MUST WATCH : ನೀರಿಗಾಗಿ ಬೀದಿಗಿಳಿದ ಮಹಿಳೆಯರು – ಖಾಲಿ ಬಿಂದಿಗೆ ಹಿಡಿದು ಬೃಹತ್ ಪ್ರೊಟೆಸ್ಟ್




