Hassan |ನೇಣು ಬಿಗಿದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ – ಸಾವಿನ ಸುತ್ತ ಅನುಮಾನ!

Hassan ಜಿಲ್ಲೆಯ ಚನ್ನರಾಯಪಟ್ಟಣದ ಅಂಬಿಕ ನಗರದಲ್ಲಿ ನೆನ್ನೆ ರಾತ್ರಿ 19 ವರ್ಷದ ಯುವತಿಯೋರ್ವಳ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸಾವಿನ ಸುತ್ತ ಸಾಕಷ್ಟು ಅನುಮಾನಗಳು ವ್ಯಕ್ತವಾಗುತ್ತಿದೆ.
ಕೊಲೆಯೋ..? ಆತ್ಮಹತ್ಯೆಯೋ
ಸ್ಥಳೀಯ ದಂಪತಿ ಸಾಕಮ್ಮ ಮತ್ತು ಮಂಜಶೆಟ್ಟಿ ಎಂಬುವರ ಪುತ್ರಿ ರಚಿತಾ (19) ಮೃತಪಟ್ಟ ದುರ್ದೈವಿಯಾಗಿದ್ದಾರೆ. ಪ್ರಥಮ ವರ್ಷದ ಬಿ.ಎ ವ್ಯಾಸಂಗ ಮಾಡುತ್ತಿದ್ದ ರಚಿತಾ ಶವ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕುಟುಂಬಸ್ಥರು ಈ ಸಾವಿನ ಹಿಂದೆ ಕೊಲೆ ಅಥವಾ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಅನುಮಾನ ವ್ಯಕ್ತಪಡಿಸಿದ್ದಾರೆ.
READ THIS : ಒಂದೇ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರು ಯುವತಿಯರ ಶವ ಪತ್ತೆ!

ಒಂದೂವರೆ ವರ್ಷದಿಂದ ಯುವಕನೊಂದಿಗೆ ಪ್ರೀತಿ?
ರಚಿತಾ ಕಳೆದ ಒಂದೂವರೆ ವರ್ಷದಿಂದ ರೇಣುಕಾಂಬ ರಸ್ತೆಯಲ್ಲಿರುವ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ನವೀನ್ ಎಂಬ ಯುವಕನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ಇದೇ ಬೇಕರಿಯಲ್ಲಿ ರಚಿತಾ ಅವರ ತಾಯಿ ಸಾಕಮ್ಮ ಕೂಡ ಕೆಲಸ ಮಾಡುತ್ತಿದ್ದರು.
ಇಬ್ಬರ ಪ್ರೇಮ ವಿಚಾರ ಕುಟುಂಬದವರಿಗೆ ತಿಳಿದಿದ್ದು, ಮುಂದಿನ ದಿನಗಳಲ್ಲಿ ಇಬ್ಬರಿಗೂ ಮದುವೆ ಮಾಡಿಸುವುದಾಗಿ ತಾಯಿ ಹೇ ಳಿದ್ದ ಎನ್ನಲಾಗಿದೆ. ಆದರೆ ಇತ್ತೀಚಿನ ದಿನಗಳಲ್ಲಿ ನವೀನ್ ರಚಿತಾಗೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿದ್ದ ಎಂದು ಆಕೆಯ ತಾಯಿ ಆರೋಪಿಸಿದ್ದಾರೆ.

Hassan – ಆತ್ಮಹತ್ಯೆಯೋ, ಬೇರೆ ಕೃತ್ಯವೋ?
ರಚಿತಾ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಚನ್ನರಾಯಪಟ್ಟಣ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಶವಪರೀಕ್ಷೆಗೆ ವ್ಯವಸ್ಥೆ ಮಾಡಲಾಗಿದೆ.
ಸದ್ಯ ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಸಾವು (UDR) ಪ್ರಕರಣ ದಾಖಲಾಗಿದ್ದು, ಯುವತಿಯ ಸಾವು ಆತ್ಮಹತ್ಯೆಯೇ ಅಥವಾ ಇದರ ಹಿಂದೆ ಬೇರೆ ಯಾವುದೇ ಕೃತ್ಯ ನಡೆದಿದೆಯೇ ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
MUST WATCH : ಸುಸಜ್ಜಿತ ಆಸ್ಪತ್ರೆ ಇದ್ರೂ ವೈದ್ಯರಿಲ್ಲ- AYUSHMAN ಕೇಂದ್ರದಲ್ಲಿ ರೋಗಿಗಳ ಪರದಾಟ.!




