
MURDER : ದಾವಣಗೆರೆಯಲ್ಲಿ ಯುವಕನ ಬರ್ಬರ ಹತ್ಯೆ!
ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿ ತಡರಾತ್ರಿ ಯುವಕನೊಬ್ಬನ ಹತ್ಯೆ ನಡೆದಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ನವರಾತ್ರಿ ಹಿನ್ನೆಲೆಯಲ್ಲಿ ದೇವಸ್ಥಾನದಲ್ಲಿ ಪ್ರಸಾದ ವ್ಯವಸ್ಥೆ ಮಾಡಿದ್ದ ವೇಳೆಯೇ ಯುವಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಲಾಗಿದೆ.
ಹಲ್ಲೆ ಮಾಡಿ ಎಸ್ಕೇಪ್!
ಹೌದು.. ಹೊನ್ನಾಳಿಯ ಬನ್ನಿಮಹಾಕಾಳಮ್ಮ ದೇವಸ್ಥಾನದ ಬಳಿ ಈ ಘಟನೆ ನಡೆದಿದೆ. ಮೃತ ಯುವಕನನ್ನು 30 ವರ್ಷದ ಅಮಿತ್ ಎಂದು ಗುರುತಿಸಲಾಗಿದೆ. ನವರಾತ್ರಿ ಹಿನ್ನೆಲೆಯಲ್ಲಿ ದೇವಸ್ಥಾನದಲ್ಲಿ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು. ಇದೇ ಸಂದರ್ಭದಲ್ಲಿ ದುಷ್ಕರ್ಮಿಗಳು ಅಮಿತ್ನ ತಲೆಗೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಸ್ಥಳದಿಂದ ಎಸ್ಕೇಪ್ ಆಗಿದ್ದಾರೆ.
READ THIS : ಚಿತ್ರದುರ್ಗದಲ್ಲಿ ಲವ್ ಜಿಹಾದ್ ಆರೋಪ – ಮಹಿಳೆ ಅನುಮಾನಾಸ್ಪದ ಸಾವು!

ತೀವ್ರ ರಕ್ತಸ್ರಾವದಿಂದ ಸಾವು!
ಇನ್ನು ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಅಮಿತ್ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಕೂಡಲೇ ಅವರನ್ನು ಚಿಕಿತ್ಸೆಗಾಗಿ ಶಿವಮೊಗ್ಗದ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ತಲೆಗೆ ಗಂಭೀರ ಗಾಯವಾಗಿದ್ದರಿಂದ ತೀವ್ರ ರಕ್ತಸ್ರಾವ ಉಂಟಾಗಿ ಅಮಿತ್ ಮೃತಪಟ್ಟಿದ್ದಾರೆ. ಇನ್ನು ಯುವಕನ ಹತ್ಯೆಯಿಂದ ಸ್ಥಳೀಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
MURDER ಗೆ ನಿಖರ ಕಾರಣವೇನು..?
ಹಳೆ ದ್ವೇಷದ ಹಿನ್ನೆಲೆಯಲ್ಲಿ ಅಮಿತ್ನ ಹತ್ಯೆ ನಡೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಆದರೆ ಕೊಲೆಗೆ ನಿಖರ ಕಾರಣವೇನು..? ಅಮಿತ್ ಮೇಲೆ ದಾಳಿ ನಡೆಸಿದವರು ಯಾರು..? ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ. ಇನ್ನು ಆರೋಪಿಗಳ ಪತ್ತೆಗೆ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.

ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಹೊನ್ನಾಳಿ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
MUST WATCH : ರಾಜ್ಯದಲ್ಲಿ ವೋಟ್ ಚೋರಿ ನಡೆದಿಲ್ಲ..! -ರಾಹುಲ್ ಗಾಂಧಿ ಐರನ್ ಲೆಗ್ ನಾಯಕ..!





