Karnataka Weather : ಮುಂದಿನ 1 ವಾರಗಳ ಕಾಲ ರಾಜ್ಯದ ಹವಾಮಾನದಲ್ಲಿ ಭಾರೀ ಏರುಪೇರು ಕಂಡುಬರಲಿದೆ.

Karnataka Weather : ರಾಜ್ಯದಲ್ಲಿ ಮುಂದಿನ ಒಂದು ವಾರ ಹವಾಮಾನದಲ್ಲಿ ಏರುಪೇರು ಕಂಡುಬರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಒಂದೆಡೆ ಸುಡುವ ಬಿಸಿಲು ಮತ್ತು ಒಣಹವೆ ಕಾಡಲಿದ್ದು, ಕೆಲ ಜಿಲ್ಲೆಗಳಲ್ಲಿ ಮಳೆ ಹಾಗೂ ಬಿರುಗಾಳಿ ಅಬ್ಬರಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
42 ಡಿಗ್ರಿ ಸೆಲ್ಸಿಯಸ್ವರೆಗೆ ತಾಪಮಾನ ಏರಿಕೆ
ಉತ್ತರ ಒಳನಾಡಿನ ಜಿಲ್ಲೆಗಳಾದ ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ ಹಾಗೂ ಗದಗ ಜಿಲ್ಲೆಗಳಲ್ಲಿ ತೀವ್ರ ಬಿಸಿಲಿನ ಎಚ್ಚರಿಕೆ ನೀಡಲಾಗಿದೆ. ಈ ಭಾಗಗಳಲ್ಲಿ ವಾರಪೂರ್ತಿ ಸುಮಾರು 42 ಡಿಗ್ರಿ ಸೆಲ್ಸಿಯಸ್ವರೆಗೆ ತಾಪಮಾನ ಏರಿಕೆಯಾಗುವ ಸಾಧ್ಯತೆ ಇದೆ.
READ THIS : ಇಂದು RCB vs LSG ಮುಖಾಮುಖಿ – ಗೆಲ್ಲೋದ್ಯಾರು?

ಬೆಂಗಳೂರಲ್ಲಿ ಏಷ್ಟಿದೆ ತಾಪಮಾನ? – Karnataka Weather
ನಿನ್ನೆ ಕಲಬುರಗಿಯಲ್ಲಿ 41.6 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ರಾಜ್ಯದಲ್ಲೇ ಅತಿ ಹೆಚ್ಚು ಬಿಸಿಲು ಕಂಡುಬಂದಿದೆ. ಬೆಳಘಾವಿ ಹಾಗೂ ಧಾರವಾಡ ಭಾಗಗಳಲ್ಲಿ 38 ಡಿಗ್ರಿ ಸೆಲ್ಸಿಯಸ್ವರೆಗೆ ತಾಪಮಾನ ಏರಿಕೆಯಾಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಲ್ಲೂ 37 ಡಿಗ್ರಿವರೆಗೆ ಬಿಸಿಲು ಇರಲಿದ್ದು, ಬೆಂಗಳೂರಿನಲ್ಲಿ ತಾಪಮಾನ 36 ಡಿಗ್ರಿ ಆಸುಪಾಸಿನಲ್ಲಿ ಇರಲಿದೆ ಎಂದು ಇಲಾಖೆ ತಿಳಿಸಿದೆ.
ಇನ್ನು ಬಿಸಿಲಿನ ನಡುವೆಯೇ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಸಾಧ್ಯತೆಯೂ ಹೆಚ್ಚಾಗಿದೆ. ಇಂದು ಬೆಂಗಳೂರು, ಮೈಸೂರು, ಮಂಡ್ಯ, ಹಾಸನ, ಶಿವಮೊಗ್ಗ ಸೇರಿದಂತೆ ಒಟ್ಟು 15 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ.
Karnata Weather – ಸಾರ್ವಜನಿಕರು ಎಚ್ಚರಿಕೆಯಿಂದಿರಲು ಸೂಚನೆ
ಮುಂದಿನ ಒಂದು ವಾರ ರಾಜ್ಯದ ಒಳನಾಡು ಮತ್ತು ಕರಾವಳಿ ಭಾಗಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಮಳೆಯ ವೇಳೆ ಗಂಟೆಗೆ ಸುಮಾರು 50 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಸೂಚಿಸಿದೆ.

MUST WATCH : ಆಪ್ತ RAJANNA ಜೊತೆ ತಿಂಡಿ ಸವಿದSIDDU – ಹಳೆಯ ನೆನಪನ್ನು ಮೆಲುಕು ಹಾಕಿದ CM




