ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: ನಟಿ Ranya Rao ಸೇರಿ ಮೂವರ ಹೇಬಿಯಸ್ ಕಾರ್ಪಸ್ ಅರ್ಜಿ ವಜಾ.

ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರನ್ಯಾ ರಾವ್ (Ranya Rao), ತರುಣ್ ರಾಜ್ ಹಾಗೂ ಸಾಹಿಲ್ ಜೈನ್ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಅಕ್ರಮ ಬಂಧನವಾಗಿದೆ ಎಂದು ಆರೋಪಿಸಿ ಬಿಡುಗಡೆ ಕೋರಿ ಮೂವರು ಆರೋಪಿಗಳು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ತಳ್ಳಿ ಹಾಕಿದೆ.
ಅರ್ಜಿ ವಜಾ
ಈ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಅನು ಶಿವರಾಮನ್ ಹಾಗೂ ವಿಜಯ್ ಕುಮಾರ್ ಪಾಟೀಲ್ ಅವರನ್ನೊಳಗೊಂಡ ವಿಭಾಗೀಯ ಪೀಠ ನಡೆಸಿತು. ಬಂಧನ ಪ್ರಕ್ರಿಯೆಯಲ್ಲಿ ಯಾವುದೇ ಕಾನೂನು ಉಲ್ಲಂಘನೆ ನಡೆದಿಲ್ಲ ಎಂದು ಅಭಿಪ್ರಾಯಪಟ್ಟ ಪೀಠ, ಮೂವರು ಆರೋಪಿಗಳ ಬಂಧನ ಕಾನೂನುಬದ್ಧವಾಗಿದೆ ಎಂದು ಸ್ಪಷ್ಟಪಡಿಸಿದೆ. ಈ ಹಿನ್ನೆಲೆಯಲ್ಲಿ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಲಾಗಿದೆ.
ಇದರಿಂದ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಆರೋಪಿಗಳಿಗೆ ತಾತ್ಕಾಲಿಕ ರಿಲೀಫ್ ದೊರೆಯದೆ ಹೋಗಿದ್ದು, ಪ್ರಕರಣದ ತನಿಖೆ ಮುಂದುವರಿಯಲಿದೆ ಎಂದು ಮೂಲಗಳು ತಿಳಿಸಿವೆ.
ಇದನ್ನು ಓದಿ : ರೊಚ್ಚಿಗೆದ್ದ ಐಂದ್ರಿತಾ ರೈ..! ಶಾಸಕ ಮುನಿರತ್ನಗೆ ಟ್ಯಾಗ್ ಮಾಡಿ ಆಕ್ರೋಶ

ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ ಹಿನ್ನೆಲೆ
2025ರ ಮಾರ್ಚ್ 3ರಂದು ದುಬೈನಿಂದ ಬೆಂಗಳೂರಿಗೆ ಆಗಮಿಸಿದ ವೇಳೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಟಿ ರನ್ಯಾ ರಾವ್ 14.8 ಕೆಜಿ ಚಿನ್ನದೊಂದಿಗೆ ಕಸ್ಟಮ್ಸ್ ಅಧಿಕಾರಿಗಳಿಂದ ಬಂಧಿಸಲ್ಪಟ್ಟಿದ್ದರು. ಡಿಆರ್ಐ ನಡೆಸಿದ ತನಿಖೆಯಲ್ಲಿ,Ranya Rao ಹಾಗೂ ಸಹ-ಆರೋಪಿಗಳು ಒಟ್ಟು 127 ಕೆಜಿ ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡಿರುವುದು ಬೆಳಕಿಗೆ ಬಂದಿದೆ.
ಚಾರ್ಜ್ಶೀಟ್ ಸಲ್ಲಿಕೆ
ಈ ಸಂಬಂಧ ಡಿಆರ್ಐ ಸುಮಾರು 250 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದ್ದು, 102 ಕೋಟಿ ರೂಪಾಯಿಗೂ ಅಧಿಕ ದಂಡ ವಿಧಿಸಲಾಗಿದೆ. ಜೊತೆಗೆ ಜಾರಿ ನಿರ್ದೇಶನಾಲಯವು (ED) 34 ಕೋಟಿ ರೂ. ಮೌಲ್ಯದ ಆಸ್ತಿಗಳನ್ನು ಜಪ್ತಿ ಮಾಡಿದೆ.
ಈ ಪ್ರಕರಣದಲ್ಲಿ ಹೋಟೆಲ್ ಉದ್ಯಮಿ ತರುಣ್ ಕೊಂಡರಾಜು ಹಾಗೂ ಆಭರಣ ವ್ಯಾಪಾರಿಗಳಾದ ಸಾಹಿಲ್ ಜೈನ್ ಮತ್ತು ಭರತ್ ಜೈನ್ ಸಹ-ಆರೋಪಿಗಳಾಗಿದ್ದಾರೆ.

ಇದನ್ನು ನೋಡಿ : ಪರಮೇಶ್ವರ್ ರಾಜ್ಯದ ಮುಖ್ಯಮಂತ್ರಿ ಆಗಲಿ: ಮಠಾಧೀಶರ ಒತ್ತಾಯ




