Chitradurga : ಆತ್ಮೀಯ ಸ್ನೇಹಿತನ ಪಾರ್ಥಿವ ಶರೀರವನ್ನು ಕಂಡು ಕಣ್ಣೀರು ಹಾಕಿದ ಡಿಕೆಶಿ

ಕಳೆದ ಒಂದು ತಿಂಗಳಿನಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ (65) ಇಂದು ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಡಿ.ಸುಧಾಕರ್ ನಿಧನಕ್ಕೆ DCM ಡಿಕೆ ಕಣ್ಣೀರು
ಚಿತ್ರದುರ್ಗ ಜಿಲ್ಲೆ ಹಿರಿಯೂರಿನಲ್ಲಿ ಸಚಿವ ಡಿ. ಸುಧಾಕರ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯಲು ಆಗಮಿಸಿದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಆತ್ಮೀಯ ಸ್ನೇಹಿತನ ಪಾರ್ಥಿವ ಶರೀರವನ್ನು ಕಂಡು ಡಿ.ಕೆ. ಶಿವಕುಮಾರ್ ದುಃಖ ತಡೆಯಲಾಗದೆ ಕಣ್ಣೀರಿಟ್ಟಿದ್ದಾರೆ.
ಬಳಿಕ ಡಿ. ಸುಧಾಕರ್ ಅವರ ಪುತ್ರ ಸುಹಾಸ್ ಅವರಿಗೆ ಡಿಕೆಶಿ ಬೆನ್ನು ತಟ್ಟಿ ಸಾಂತ್ವನ ಹೇಳಿದ್ದು , ಡಿಕೆಶಿಯನ್ನು ನೋಡುತ್ತಿದ್ದಂತೆಯೇ ಸುಹಾಸ್ ಕೂಡ ಭಾವುಕರಾಗಿದ್ದಾರೆ.
READ THIS : ರಾಷ್ಟ್ರೀಯ ಹೆದ್ದಾರಿಗೆ ಫ್ರೀ ಪೈಂಟ್ ಬಳೆದ ಟೆಂಪೋ.!

Chitradurga – ಜನಪ್ರಿಯ ನಾಯಕ
ಡಿ. ಸುಧಾಕರ್ ಅವರು Chitradurga ಜಿಲ್ಲೆಯ ಹಿರಿಯ ರಾಜಕಾರಣಿಯಾಗಿ ಜನಸೇವೆಯಲ್ಲಿ ತೊಡಗಿಸಿಕೊಂಡಿದ್ದರು. ಯೋಜನೆ ಮತ್ತು ಸಾಂಖ್ಯಿಕ ಸಚಿವರಾಗಿ ಅವರು ರಾಜ್ಯದ ಅಭಿವೃದ್ಧಿ ಕಾರ್ಯಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು. ಅವರ ಸರಳ ವ್ಯಕ್ತಿತ್ವ ಮತ್ತು ಕ್ಷೇತ್ರದ ಜನರೊಂದಿಗೆ ಹೊಂದಿದ್ದ ನಿಕಟ ಸಂಪರ್ಕ ಅವರನ್ನು ಜನಪ್ರಿಯ ನಾಯಕರನ್ನಾಗಿ ಮಾಡಿತ್ತು. ಜಿಲ್ಲೆಯ ಅಭಿವೃದ್ಧಿಗಾಗಿ ಅವರು ಹಮ್ಮಿಕೊಂಡಿದ್ದ ಹಲವಾರು ಯೋಜನೆಗಳು ಇಂದಿಗೂ ಚಾಲ್ತಿಯಲ್ಲಿವೆ. ಅವರ ನಿಧನವು ಚಿತ್ರದುರ್ಗ ಜಿಲ್ಲೆಗೆ ಮಾತ್ರವಲ್ಲದೆ ಇಡೀ ಕರ್ನಾಟಕ ರಾಜ್ಯಕ್ಕೆ ತುಂಬಲಾರದ ನಷ್ಟವನ್ನುಂಟು ಮಾಡಿದೆ.

MUST WATCH : ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ವಿಜಯ್ ಅಬ್ಬಬ್ಬಾ ದಳಪತಿ ಗತ್ತು ಹೇಗಿದೆ ನೋಡಿ




