BY – Election Result : ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿಗೆ 21,800 ಮತಗಳ ಭರ್ಜರಿ ಗೆಲುವು

By – Election Result : ಬಾಗಲಕೋಟೆ ವಿಧಾನಸಭಾ ಉಪಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಇನ್ನು ಈ ಗೆಲುವಿನೊಂದಿಗೆ ಕಾಂಗ್ರೆಸ್ ಪಕ್ಷ ಕ್ಷೇತ್ರದಲ್ಲಿ ತನ್ನ ಬಲವನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದು, ಕಾರ್ಯಕರ್ತರಲ್ಲಿ ಸಂಭ್ರಮದ ವಾತಾವರಣ ನಿರ್ಮಾಣವಾಗಿದೆ
ಬಾಗಲಕೋಟೆಯಲ್ಲಿ ಕಮಾಲ್ ಮಾಡಿದ ಉಮೇಶ್ ಮೇಟಿ
21,866 ಮತಗಳ ಅಂತರದಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರನ್ನು ಸೋಲಿಸಿ ಉಮೇಶ್ ಮೇಟಿ ಗೆಲುವಿನ ನಗೆ ಬೀರಿದ್ದಾರೆ. ಉಮೇಶ್ ಮೇಟಿ 97,941 ಮತಗಳನ್ನು ಪಡೆದರೆ, ವೀರಣ್ಣ ಚರಂತಿಮಠ ಅವರು 76,075 ಮತಗಳನ್ನು ಗಳಿಸಿದ್ದಾರೆ.
READ THIS : Davanagere ದಕ್ಷಿಣದಲ್ಲಿ ಕಾಂಗ್ರೆಸ್ ಗೆಲುವು..!!

ಕ್ಷೇತ್ರದ ಮತದಾರರಿಗೆ ಕೃತಜ್ಞತೆ
ಇನ್ನು ಈ ಭರ್ಜರಿ ಗೆಲುವಿನ ಬಳಿಕ ಮಾತನಾಡಿದ ಉಮೇಶ್ ಮೇಟಿ ಕ್ಷೇತ್ರದ ಮತದಾರರಿಗೆ ಕೃತಜ್ಞತೆ ಸಲ್ಲಿಸಿದರು. “ಬಾಗಲಕೋಟೆ ವಿಧಾನಸಭಾ ಮತಕ್ಷೇತ್ರದ ನಗರ ಹಾಗೂ ಗ್ರಾಮೀಣ ಭಾಗದ ಎಲ್ಲಾ ಮತದಾರರಿಗೆ ಧನ್ಯವಾದಗಳು ತಿಳಿಸುತ್ತೇನೆ.
ಈ ಗೆಲುವು ನನ್ನ ವೈಯಕ್ತಿಕ ಸಾಧನೆಯಲ್ಲ, ಇಡೀ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಹಾಗೂ ಗ್ಯಾರಂಟಿ ಸರಕಾರದ ಗೆಲುವಾಗಿದೆ” ಎಂದು ಅವರು ತಿಳಿಸಿದ್ದಾರೆ.

MUST WATCH : ಮಾಟ-ಮಂತ್ರ ಹೆಸರಲ್ಲಿ ನಿರಂತರ ಅ*ಚಾರ..? – ಜ್ಯೋತಿಷಿ ವಿರುದ್ಧ ಬ್ಯೂಟಿಷಿಯನ್ ದೂರು




