ಬಿಎಂಟಿಸಿಯಿಂದ ಸಾಲು ಸಾಲು ಅಪಘಾತ – ಬೈಕ್ ಡಿಕ್ಕಿ ಹೊಡೆದ BMTC : ಮಹಿಳೆಗೆ ಗಂಭೀರ ಗಾಯ

ಬೆಂಗಳೂರಿನಲ್ಲಿ ಬಿಎಂಟಿಸಿಗೆ ಬಲಿಯಾಗುತ್ತಿರುವವ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಸಾರ್ವಜನಿಕರ ಸಂಚಾರಕ್ಕೆ ನೆರವಾಗಬೇಕಿದ್ದ ಬಸ್ಗಳು ಕೆಲವೊಮ್ಮ ಅವರ ಜೀವವನ್ನೇ ಕಸಿದುಕೊಳ್ತಿರುವ ಘಟನೆಗಳು ಸಾರ್ವಜನಿಕರಲ್ಲಿ ಆತಂಕ ಹುಟ್ಟಿಸಿವೆ. ಹೌದು.. ನಿನ್ನೆ BMTC ಗೆ ಓರ್ವ ಯುವಕ ಬಲಿಯಾಗಿದ್ರೆ, ಇಂದು ಬಿಎಂಟಿಸಿ ಬಸ್ ಗುದ್ದಿ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

BMTC – ಯಶವಂತಪುರ ಸರ್ಕಲ್ನಲ್ಲಿ ಘಟನೆ
ಬೆಂಗಳೂರಿನ ಯಶವಂತಪುರ ಸರ್ಕಲ್ನಲ್ಲಿ ಈ ಘಟನೆ ನಡೆದಿದ್ದು, ಚಲಿಸುತ್ತಿದ್ದ ಬೈಕಿಗೆ ಹಿಂಬದಿಯಿಂದ ಬಂದು ಬಿಎಂಟಿಸಿ ಬಸ್ ಬೈಕಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ನಲ್ಲಿದ್ದ ಮಹಿಳೆ ಕೆಳಗೆ ಬಿದ್ದು ಗಾಯಗೊಂಡಿದ್ದಾರೆ. ಇನ್ನು ಕೂಡಲೇ ಸ್ಥಳೀಯರು ಧಾವಿಸಿ, ಮಹಿಳೆಯನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗ್ತಿದೆ.
READ THIS : ಮಾದಾವರ -ತುಮಕೂರು ಮೆಟ್ರೋ ರೈಲು ಯೋಜನೆ – ಸರ್ಕಾರಕ್ಕೆ ಡಿಪಿಆರ್ ಸಲ್ಲಿಕೆ

ಸ್ಥಳಕ್ಕೆ ಯಶವಂತಪುರ ಸಂಚಾರ ಪೊಲೀಸರು ಭೇಟಿ
ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಯಶವಂತಪುರ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬಸ್ ತಡೆದು ಚಾಲಕನನ್ನು ವಿಚಾರಣೆಗೊಳಪಡಿಸಿದ್ದಾರೆ. ಇನ್ನು ಅಪಘಾತದ ನಿಖರ ಕಾರಣ ತಿಳಿಯಲು ಸಿಸಿಟಿವಿ ದೃಶ್ಯಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದು, ಸದ್ಯ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

MUST WATCH : ಜನ ಸಾಯ್ತಾರಲ್ಲ MODI MODI ಅಂತ ಅವ್ರನ್ನ ಕೇಳಿ ಎಂದ S.R.SRINIVAS.!




