Bengaluru : ಬೆಲೆ ಏರಿಕೆ ನಡುವೆಯೂ ರಾಜ್ಯದಲ್ಲಿ ದಾಖಲೆ ಪ್ರಮಾಣದಲ್ಲಿ ಮಾರಾಟವಾದ ಮದ್ಯ – ಸರ್ಕಾರಕ್ಕೆ ಬಂದ ಆದಾಯ ಎಷ್ಟು?

Bengaluru : ರಾಜ್ಯದಲ್ಲಿ ಬೆಲೆ ಏರಿಕೆಯ ನಡುವೆಯೂ ಮದ್ಯ ಪ್ರಿಯರು ಮಾತ್ರ ಹಿಂದೆ ಸರಿದಿಲ್ಲ. ಕರ್ನಾಟಕದಲ್ಲಿ ಏಪ್ರಿಲ್ ತಿಂಗಳಲ್ಲಿ ದಾಖಲೆ ಪ್ರಮಾಣದಲ್ಲಿ ಮದ್ಯ ಮಾರಾಟವಾಗಿದ್ದು, ಕಳೆದ 13 ವರ್ಷಗಳ ಇತಿಹಾಸವನ್ನೇ ಬ್ರೇಕ್ ಮಾಡಿದೆ. ಅಬಕಾರಿ ಇಲಾಖೆಯ ದಾಖಲೆ ಪ್ರಕಾರ, ಒಂದೇ ತಿಂಗಳಲ್ಲಿ ಇಷ್ಟೊಂದು ಪ್ರಮಾಣದ ಮದ್ಯ ಮಾರಾಟವಾಗಿರುವುದು ಇದೇ ಮೊದಲು ಎನ್ನಲಾಗುತ್ತಿದೆ.

ದಾಖಲೆ ಪ್ರಮಾಣದಲ್ಲಿ ಮಾರಾಟವಾದ ಮದ್ಯ
ವಿಸ್ಕಿ, ಬ್ರಾಂದಿ, ರಮ್ ಹಾಗೂ ಜಿನ್ ಸೇರಿದಂತೆ ಏಪ್ರಿಲ್ ತಿಂಗಳಲ್ಲಿ ದಾಖಲೆಯ 68.17 ಲಕ್ಷ ಬಾಕ್ಸ್ ಐಎಂಎಲ್ ಮದ್ಯ ಮಾರಾಟವಾಗಿದೆ. ಒಂದು ಬಾಕ್ಸ್ನಲ್ಲಿ 8.64 ಲೀಟರ್ ಮದ್ಯ ಇರಲಿದ್ದು, ಕಳೆದ ವರ್ಷದ ಏಪ್ರಿಲ್ ತಿಂಗಳಿಗೆ ಹೋಲಿಸಿದರೆ ಈ ಬಾರಿ ಭಾರೀ ಏರಿಕೆ ಕಂಡುಬಂದಿದೆ. ಇನ್ನು ಬಿಯರ್ ಮಾರಾಟದಲ್ಲೂ ದಾಖಲೆ ನಿರ್ಮಾಣವಾಗಿದ್ದು, ಏಪ್ರಿಲ್ ತಿಂಗಳಲ್ಲಿ 50.39 ಲಕ್ಷ ಬಾಕ್ಸ್ ಬಿಯರ್ ಮಾರಾಟವಾಗಿದೆ. ಒಂದು ಬಾಕ್ಸ್ನಲ್ಲಿ 7.80 ಲೀಟರ್ ಬಿಯರ್ ಇರಲಿದ್ದು, ಕಳೆದ ವರ್ಷದ ಇದೇ ಅವಧಿಯಲ್ಲಿ 41.60 ಲಕ್ಷ ಬಾಕ್ಸ್ ಮಾರಾಟವಾಗಿತ್ತು. ಈ ಬಾರಿ ಶೇಕಡಾ 21.13ರಷ್ಟು ಬೆಳವಣಿಗೆ ದಾಖಲಾಗಿದೆ.
READ THIS : ಸೂರ್ಯಕುಮಾರ್ ಯಾದವ್ ದಂಪತಿಗೆ ಹೆಣ್ಣು ಮಗು ಜನನ

ಸರ್ಕಾರಕ್ಕೆ ಬಂದ ಆದಾಯ ಎಷ್ಟು?
ಈ ಮೂಲಕ ಮದ್ಯ ಮಾರಾಟದಿಂದ ಸರ್ಕಾರದ ಬೊಕ್ಕಸಕ್ಕೂ ಭಾರೀ ಆದಾಯ ಹರಿದುಬಂದಿದ್ದು, ಪ್ರಸಕ್ತ ಏಪ್ರಿಲ್ ತಿಂಗಳಲ್ಲಿ ಬರೋಬ್ಬರಿ 3,688 ಕೋಟಿ ರೂಪಾಯಿ ಸಂಗ್ರಹವಾಗಿದೆ. ಅಲ್ದೇ ಕಳೆದ ವರ್ಷ ಇದೇ ಅವಧಿಯಲ್ಲಿ 2,904 ಕೋಟಿ ರೂಪಾಯಿ ಆದಾಯ ಬಂದಿತ್ತು ಎನ್ನಲಾಗಿದೆ.
ಮದ್ಯ ಮಾರಾಟ ಹೆಚ್ಚಳಕ್ಕೆ ಕಾರಣವೇನು..?
ಇನ್ನು ಕರ್ನಾಟಕ ಗಡಿಗೆ ಹೊಂದಿಕೊಂಡಿರುವ ಕೇರಳ ಹಾಗೂ ತಮಿಳುನಾಡು ರಾಜ್ಯಗಳ ವಿಧಾನಸಭೆ ಚುನಾವಣೆಯೂ ಮದ್ಯ ಮಾರಾಟ ಹೆಚ್ಚಳಕ್ಕೆ ಕಾರಣವಾಗಿರಬಹುದು ಎಂಬ ಮಾತುಗಳು ಕೇಳಿಬರುತ್ತಿವೆ.
ಮತದಾನಕ್ಕೂ ಮುನ್ನ ಆ ರಾಜ್ಯಗಳಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದ್ದ ಹಿನ್ನೆಲೆ, ಗಡಿ ಭಾಗಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮದ್ಯ ಮಾರಾಟವಾಗಿರಬಹುದು ಎಂದು ಅಂದಾಜಿಸಲಾಗಿದೆ.

MUST WATCH : ಯಾರಾಗ್ತಾರೆ KERALAದ CM..? – ಸಿಎಂ ಸ್ಥಾನಕ್ಕೆ ಮೂವರ ಮಧ್ಯೆ FIGHT..?




