ಕ್ರಿಸ್ಮಸ್ ಹಬ್ಬದ ಪ್ರಯುಕ್ತ ರಾಜ್ಯಾದ್ಯಂತ 1000ಕ್ಕೂ ಹೆಚ್ಚು ವಿಶೇಷ KSRTC ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ.

ಕ್ರಿಸ್ಮಸ್ ಹಬ್ಬದ ಹಿನ್ನೆಲೆ ಪ್ರಯಾಣಿಕರ ಹೆಚ್ಚಿದ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯಾದ್ಯಂತ 1,000ಕ್ಕೂ ಹೆಚ್ಚು ವಿಶೇಷ ಕೆಎಸ್ಆರ್ಟಿಸಿ ಬಸ್ಗಳನ್ನು ವ್ಯವಸ್ಥೆ ಮಾಡಲಾಗಿದೆ. ಈ ವಿಶೇಷ ಬಸ್ಗಳು ಇಂದಿನಿಂದ ಡಿಸೆಂಬರ್ 28ರವರೆಗೆ ಸಂಚರಿಸಲಿವೆ ಎಂದು KSRTC ತಿಳಿಸಿದೆ.
ಇದನ್ನು ಓದಿ : ಬ್ರಾಡ್ಮನ್ ದಾಖಲೆ ಸರಿಗಟ್ಟಿದ ಟ್ರಾವಿಸ್ ಹೆಡ್
ಹಲವು ನಗರಗಳಿಗೆ ವಿಶೇಷ ಬಸ್ಗಳ ವ್ಯವಸ್ಥೆ
ಡಿಸೆಂಬರ್ 19, 20 ಹಾಗೂ 24ರಂದು ಬೆಂಗಳೂರಿನಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಮಂಗಳೂರು, ಉಡುಪಿ, ಮಡಿಕೇರಿ, ಹಾಸನ, ಮೈಸೂರು, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ದಾವಣಗೆರೆ, ಬಳ್ಳಾರಿ, ಕಲಬುರಗಿ, ರಾಯಚೂರು, ಬೀದರ್ ಸೇರಿದಂತೆ ಹಲವು ನಗರಗಳಿಗೆ ವಿಶೇಷ ಬಸ್ಗಳ ವ್ಯವಸ್ಥೆ ಮಾಡಲಾಗಿದೆ. ಹಬ್ಬದ ನಂತರ ಡಿಸೆಂಬರ್ 26 ಹಾಗೂ 28ರಂದು ವಿವಿಧ ನಗರಗಳಿಂದ ಬೆಂಗಳೂರಿಗೆ ಮರಳುವ ಪ್ರಯಾಣಿಕರ ಅನುಕೂಲಕ್ಕಾಗಿ ವಿಶೇಷ ಬಸ್ಗಳು ಸಂಚರಿಸಲಿವೆ.
ಸಾಮಾನ್ಯ ದರಗಳೇ ಅನ್ವಯ
ಹಬ್ಬದ ಅವಧಿಯಲ್ಲಿ ಹೆಚ್ಚುವರಿ ಪ್ರಯಾಣಿಕರ ದಟ್ಟಣೆಗೆ ಅನುಗುಣವಾಗಿ ಅಗತ್ಯ ವ್ಯವಸ್ಥೆ ಕೈಗೊಳ್ಳಲಾಗಿದ್ದು, ಸಾಮಾನ್ಯ ದರಗಳೇ ಅನ್ವಯವಾಗಲಿವೆ. ಯಾವುದೇ ವಿಶೇಷ ಹಬ್ಬದ ದರ ವಿಧಿಸಲಾಗುವುದಿಲ್ಲ. ಬೇಡಿಕೆ ಹೆಚ್ಚಾದಲ್ಲಿ ಇನ್ನಷ್ಟು ಬಸ್ಗಳನ್ನು ನಿಯೋಜಿಸುವ ವ್ಯವಸ್ಥೆಯೂ ಮಾಡಲಾಗುವುದು ಎಂದು ಕೆಎಸ್ಆರ್ಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನು ನೋಡಿ : ಹಲಸು ಮತ್ತು ಹುಣಸೇಹಣ್ಣು ಬೋರ್ಡ್ ರಚನೆಗೆ ಕೇಂದ್ರ ಸರ್ಕಾರಕ್ಕೆ ದೇವೇಗೌಡರ ಮನವಿ : ಬಯಲುಸೀಮೆ ರೈತರಿಗೆ ಅನುಕೂಲ




