ಸಚಿವ D Sudhakar ನಿಧನ ಹಿನ್ನೆಲೆ ನಾಳೆ ಜಿಲ್ಲೆಗೆ ಸರ್ಕಾರಿ ರಜೆ ಘೋಷಣೆ, 3 ದಿನ ಶೋಕಾಚರಣೆ

ಕರ್ನಾಟಕ ರಾಜಕಾರಣದ ಹಿರಿಯ ಮುಖಂಡರು ಹಾಗೂ ರಾಜ್ಯ ಸರ್ಕಾರದ ಹಾಲಿ ಯೋಜನೆ ಮತ್ತು ಸಾಂಖ್ಯಿಕ ಸಚಿವರಾದ ಸುಧಾಕರ್ ಅವರು ಇಂದು ವಿಧಿವಶರಾಗಿದ್ದಾರೆ. ಸಚಿವರ ನಿಧನದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಮಹತ್ವದ ನಿರ್ಧಾರಗಳನ್ನು ಕೈಗೊಂಡಿದ್ದು, ಗೌರವ ಸೂಚಕವಾಗಿ ಇಂದಿನಿಂದಲೇ ಅನ್ವಯವಾಗುವಂತೆ ಮೂರು ದಿನಗಳ ಕಾಲ ರಾಜ್ಯಾದ್ಯಂತ ಅಧಿಕೃತ ಶೋಕಾಚರಣೆಯನ್ನು ಘೋಷಿಸಿದೆ.
ಇದರೊಂದಿಗೆ ಸಚಿವರ ತವರು ಜಿಲ್ಲೆಯಾದ ಚಿತ್ರದುರ್ಗದಲ್ಲಿ ನಾಳೆ ಅಂದರೆ ಮೇ 11ರ ಸೋಮವಾರದಂದು ಸಾರ್ವಜನಿಕ ರಜೆಯನ್ನು ಪ್ರಕಟಿಸಲಾಗಿದೆ.

ಮೇ 10ರಿಂದ ಮೇ 12ರವರೆಗೆ ರಾಜ್ಯಾದ್ಯಂತ ಶೋಕಾಚರಣೆ ಜಾರಿ
ಸಚಿವ ಡಿ. ಸುಧಾಕರ್ ಅವರ ಅಗಲಿಕೆಯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಕಚೇರಿಯಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ. ಮೇ 10ರಿಂದ ಮೇ 12ರವರೆಗೆ ರಾಜ್ಯಾದ್ಯಂತ ಶೋಕಾಚರಣೆ ಜಾರಿಯಲ್ಲಿರಲಿದೆ.
ಇನ್ನು ಈ ಅವಧಿಯಲ್ಲಿ ಯಾವುದೇ ಸಾರ್ವಜನಿಕ ಮನರಂಜನಾ ಕಾರ್ಯಕ್ರಮಗಳು ನಡೆಯುವುದಿಲ್ಲ. ಸರ್ಕಾರದ ವತಿಯಿಂದ ಆಯೋಜಿಸಲಾಗಿದ್ದ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಶುಭ ಸಮಾರಂಭಗಳನ್ನು ತಕ್ಷಣದಿಂದಲೇ ರದ್ದುಗೊಳಿಸಲಾಗಿದೆ.
ಶೋಕಾಚರಣೆಯ ಭಾಗವಾಗಿ ರಾಜ್ಯದ ಎಲ್ಲಾ ಸರ್ಕಾರಿ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧಮಟ್ಟದಲ್ಲಿ ಹಾರಿಸಲು ಸೂಚನೆ ನೀಡಲಾಗಿದೆ.
READ THIS : ತಮಿಳುನಾಡಲ್ಲಿ ‘ದಳಪತಿ’ ಯುಗಾರಂಭ – CM ಆಗಿ ವಿಜಯ್ ಪ್ರಮಾಣವಚನ

ಚಿತ್ರದುರ್ಗ ಜಿಲ್ಲೆಗೆ ನಾಳೆ ಸಾರ್ವಜನಿಕ ರಜೆ
D Sudhakar ಅವರ ನಿಧನಕ್ಕೆ ಗೌರವ ಸಲ್ಲಿಸುವ ಸಲುವಾಗಿ ಚಿತ್ರದುರ್ಗ ಜಿಲ್ಲೆಯಾದ್ಯಂತ ಮೇ 11ರಂದು ಸಾರ್ವಜನಿಕ ರಜೆ ಘೋಷಿಸಲಾಗಿದೆ.
ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳು, ಶಾಲೆಗಳು, ಕಾಲೇಜುಗಳು ಹಾಗೂ ಸರ್ಕಾರಿ ಅನುದಾನಿತ ಶಿಕ್ಷಣ ಸಂಸ್ಥೆಗಳಿಗೆ ಈ ರಜೆ ಅನ್ವಯವಾಗಲಿದೆ.
ನೆಗೋಷಿಯಬಲ್ ಇನ್ಸ್ಟ್ರುಮೆಂಟ್ ಆಕ್ಟ್ 1881ರ ಅಡಿಯಲ್ಲಿ ಈ ರಜೆಯನ್ನು ಘೋಷಿಸಲಾಗಿದ್ದು, ಬ್ಯಾಂಕುಗಳು ಹಾಗೂ ಇತರ ಹಣಕಾಸು ಸಂಸ್ಥೆಗಳಿಗೂ ಇದು ಅನ್ವಯವಾಗಲಿದೆ. ಜಿಲ್ಲೆಯ ಜನತೆಗೆ ಸಚಿವರ ಅಂತಿಮ ದರ್ಶನ ಪಡೆಯಲು ಹಾಗೂ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸರ್ಕಾರದ ಅಧೀನ ಕಾರ್ಯದರ್ಶಿ ಬಾಣದರಂಗಯ್ಯ ಎನ್.ಆರ್. ತಿಳಿಸಿದ್ದಾರೆ.

MUST WATCH : BSY ಅವರ ಹೋರಾಟ ಹೇಗಿತ್ತು? – KOTA SRINIVAS POOJARY ಏನಂದ್ರು




